Site icon Kannada News-suddikshana

ಮೇ.31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ.

ಇದೇ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಮಾಹಿತಿ ನೀಡಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದ್ದು, ರಾಜ್ಯ ಜನತೆ ನಿಟ್ಟುಸಿರು ಬಿಟ್ಟಂತಾಗಿದೆ.

ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಜೂನ್‌, ಜುಲೈ, ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳುಗಳೇ ನಿರ್ಣಾಯಕ. ಈ ನಾಲ್ಕು ತಿಂಗಳು ಮಳೆಗಾಲಕ್ಕೆ ಉತ್ತಮ ವೇದಿಕೆಯಾಗಿದೆ. ಈ ಬಾರಿ ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್‌ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಹೀಗಾಗಿ ಹವಾಮಾನ ಇಲಾಖೆ ಅಧಿಕಾರಿಗಳು ಕೂಡ ಮುಂಗಾರು ಮಾರುತಗಳ ಚಲನವಲನ ಪರಿಶೀಲನೆ ಮಾಡಿ, ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

Exit mobile version