Site icon Kannada News-suddikshana

ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್​ಐಟಿ ದಾಳಿ

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.

ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದಾರೆ.

Exit mobile version