SUDDIKSHANA KANNADA NEWS/ DAVANAGERE/ DATE:24-10-2024
ದಾವಣಗೆರೆ: ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದ ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಣ್ಣಪ್ಪ ಎಂಬಾತನೇ ಕೊಲೆಗೈದ ಆರೋಪಿ. ಸತ್ಯಮ್ಮ (40) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಅಣ್ಣಪ್ಪನು ನಿತ್ಯವೂ ಮದ್ಯ ಸೇವನೆಗೆ ಹಣ ನೀಡುವಂತೆ ಸತ್ಯಮ್ಮಳ್ಳನ್ನು ಪೀಡಿಸುತ್ತಿದ್ದ. ಮಾತ್ರವಲ್ಲ, ಹಿಂಸೆ ಕೊಡುತ್ತಿದ್ದ. ಸತ್ಯಮ್ಮ ಹಣ ನೀಡದ ಕಾರಣ ಅವರ ಮೇಲೆ ಹಲ್ಲೆ ಮಾಡಿದ್ದರಿಂದ ಸಾವು ಕಂಡಿದ್ದಾರೆ.
ಕೊಲೆಯನ್ನು ಮುಚ್ಚಿ ಹಾಕುವ ಸಲುವಾಗಿ ಆಕೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಷಿಸಿ ಮೃತಪಟ್ಟಿದ್ದಾಳೆ ಎಂದು ಕಥೆ ಕಟ್ಟಿದ್ದ. ಆಮೇಲೆ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಹೊರ ಬಿದ್ದಿದೆ. ಈ ಸಂಬಂಧ ಬಿಳಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.