SUDDIKSHANA KANNADA NEWS/ DAVANAGERE/ DATE:17-08-2024
ದಾವಣಗೆರೆ: ಕಲ್ಲಿನಿಂದ ಹಲ್ಲೆ ನಡೆಸಿ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ನಗರದ ಕೆಟಿಜೆ ನಗರದ 17ನೇ ತಿರುವಿನ ಕುಂಬಾರ ಓಣಿಯಲ್ಲಿ ನಡೆದಿದೆ.
ದೇವರಾಜ್ (43) ಹತ್ಯೆ ಮಾಡಿದ ಆರೋಪಿ. ರೇಖಾ ಕೊಲೆಗೀಡಾದಾಕೆ. ಕೆಲ ವರ್ಷಗಳ ಹಿಂದೆ ವಿವಾಹವಾಗಿದ್ದ ದೇವರಾಜ್ ಮತ್ತು ರೇಖಾ ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ಆದರೆ ಕೆಲ ದಿನಗಳ ಹಿಂದೆ ಕೌಟುಂಬಿಕ ಕಲಹ ಹೆಚ್ಚಾಗಿತ್ತು. ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ದೇವರಾಜ್ ತನ್ನ ಪತ್ನಿ ರೇಖಾಳಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.
ತೀವ್ರ ರಕ್ತಸ್ರಾವವಾಗಿ ರೇಖಾ ಸಾವನ್ನಪ್ಪಿದ್ದು, ಕೌಟುಂಬಿಕ ಕಲಹದಿಂದ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪತ್ನಿ ಕೊಲೆಗೈದ ಪತಿ ದೇವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.