ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರೀತಿಯಿಂದ ನೀಡುತ್ತಿದ್ದ ಮುಯ್ಯಿ ಈಗ ದ್ವೇಷಕ್ಕೆ ತಿರುಗಿದೆ, ಸಿರಿವಂತಿಕೆ ಜೊತೆ ಹೃದಯ ಶ್ರೀಮಂತಿಕೆ ಬೇಕು: ಸಿರಿಗೆರೆ ಶ್ರೀ

On: February 29, 2024 11:18 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:29-02-2024

ದಾವಣಗೆರೆ: ಮದುವೆ ಮನೆಗಳಲ್ಲಿ ನೀಡುತ್ತಿದ್ದ ಮುಯ್ಯಿ ಈಗ ದ್ವೇಷಕ್ಕೆ ತಿರುಗಿದೆ. ಸಿರಿವಂತಿಕೆ ಜೊತೆಗೆ ಹೃದಯ ಶ್ರೀಮಂತಿಕೆ ಮರೆಯಬಾರದು ಎಂದು ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಸಲಹೆ ನೀಡಿದರು.

ಸಿರಿಗೆರೆ ಸಮೀಪದ ಸೀಗೇಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಿರುವ ಬಸವೇಶ್ವರ ದೇವಾಲಯ ಉದ್ಭಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಕಣ್ಮರೆಯಾಗುತ್ತಿರುವ ಸಂಪ್ರದಾಯ ಉಳಿಸಿ ಎಂದು ಕರೆ ನೀಡಿದರು.

ಸೀಗೇಹಳ್ಳಿಯಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟಿಸಿದ ಶ್ರೀ ತರಳಬಾಳು ಜಗದ್ಗುರುಗಳವರು ಗ್ರಾಮಸ್ಥರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನೀರಿನ ಬವಣೆ ನೀಗಿಸಿದ ಶ್ರೀ ಜಗದ್ಗುರುಗಳವರಿಗೆ ಗ್ರಾಮಸ್ಥರು ಭಕ್ತಿ ನಮನ ಸಲ್ಲಿಸಿದರು.

ಬದುಕಿಗೆ ಸಿಂಚನ ನೀಡುತ್ತಿದ್ದ ಹಲವಾರು ಪುರಾತನ ಸಂಪ್ರದಾಯಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ಉಳಿಸಿಕೊಂಡು ಹೋಗುವ ಪ್ರಯತ್ನ ಆಗಬೇಕು. ಮದುವೆ ಸಂದರ್ಭದಲ್ಲಿ ಹಿಂದೆ ಮುಯ್ಕಿ ಹಾಕುವ ಪದ್ಧತಿ ಇತ್ತು. ನೂತನ ವಧು-ವರರು ಧರಿಸುತ್ತಿದ್ದ ಬಾಸಿಂಗವನ್ನು ಮುಂದಿನ ಒಂದು ವರ್ಷದವರೆಗೆ ಇಲ್ಲವೇ ಮನೆಗೆ ಮಗು ಬರುವವರೆಗೆ ಕಾಪಾಡಲಾಗುತ್ತಿತ್ತು. ಈಗ ಅಂತಹ ಸಂಪ್ರದಾಯ ಕಾಣೆಯಾಗಿದೆ ಎಂದು ಶ್ರೀಗಳು ವಿಷಾದ ವ್ಯಕ್ತಪಡಿಸಿದರು.

ಭರಮಸಾಗರ ಏತ ನೀರಾವರಿ ಯೋಜನೆಯಿಂದ ಈ ಭಾಗದ ಜನರ ಬದುಕು ಸುಧಾರಣೆಯಾಗುತ್ತಿದೆ. ಹಳ್ಳಿಗಳಲ್ಲೂ ಆಧುನಿಕ ಮನೆಗಳು ನಿರ್ಮಾಣ ಆಗುತ್ತಿರುವುದು ಸಂತಸ ತಂದಿದೆ. ಸಿರಿವಂತಿಕೆಯ ಜೊತೆ ಹೃದಯ ಶ್ರೀಮಂತಿಕೆಯನ್ನು ಮರೆಯಬಾರದು ಎಂದು ಸೂಚಿಸಿದರು.

ಭರಮಸಾಗರದಲ್ಲಿನಡೆಯಬೇಕಿದ್ದ ತರಳಬಾಳು ಹುಣ್ಣಿಮೆ ರದ್ದು ಮಾಡಿ 3 ದಿನಗಳ ಕಾಲ ಸಿರಿಗೆರೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರು ತಮ್ಮ ನಿರೀಕ್ಷೆಗೊ ಮೀರಿಕಾಣಿಕೆ ಸಲ್ಲಿಸಿದರು. ಮೂರು ದಿನಗಳ ಕಾಲ ದಾಸೋಹವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅನುಕೂಲವಾಯಿತು ಎಂದು ತಿಳಿಸಿದರು.

ಅಕ್ಕಮಹಾದೇವಿಯ ವಚನಗಳಲ್ಲಿ ದೇವರ ಬಗೆಗೆ ಅಕೆಗಿರುವ ಅದಮ್ಮ ವಿಶ್ವಾಸವನ್ನು ಕಾಣಬಹುದು. ಹಾಗೆಯೇ ರಾಷ್ಟ್ರಕವಿ ಶಿವರುದ್ರಪ್ಪನವರು. ಸಹ ಆಸ್ತಿಕರೇ ಆಗಿದ್ದರು. ಎಲ್ಲೋ ಹುಡುಕಿದೆ ಇಲ್ಲದ ದೇವರ ಎಂಬ ಕವಿತೆಯಲ್ಲಿ ಅವರು ದೇವರನ್ನು ನಿರಾಕರಣೆ ಮಾಡಿಲ್ಲ ಎಂದು ವಿಶ್ಲೇಷಿಸಿದರು.

ದೇವಾಲಯ ನಿರ್ಮಾಣಕ್ಕೆ ಸಹಕರಿಸಿದವರನ್ನು ಶ್ರೀಗಳು ಗೌರವಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಲಮ್ಮ ಭೈರಪ್ಪ, ಪಿಡಿಒ ಹನ್ನಿರಾಬಾನು, ಫಾಲಾಕ್ಷಪ್ಪ, ಕುಬೇರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ್‌,ತರಳಬಾಳು ಯೂತ್ಸ್‌ ತಂಡ, ಗ್ರಾಮಸ್ಥರು ಭಾಗವಹಿಸಿದ್ದರು. ದಾವಣಗೆರೆಯ ಗುರು ಪಂಚಾಕ್ಷರ ಸಂಗೀತ ವಿದ್ಕಾಲಯದ ಟಿ.ಎಚ್‌.ಎಂ. ಶಿವಕುಮಾರಸ್ವಾಮಿ ತಂಡದವರು ವಚನ ಗೀತೆಗಳನ್ನು ಹಾಡಿದರು. ಗ್ರಾಮದ ವಾಣಿಜ್ಯೋದ್ಯಮಿ ಎಸ್‌. ಬಿ.ಮಂಜಪ್ಪ ಸ್ವಾಗತಿಸಿದರು. ರಾಜಶೇಖರಯ್ಯ ನಿರೂಪಣೆ ಮಾಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment