SUDDIKSHANA KANNADA NEWS/DAVANAGERE/DATE:25_12_2025
ಬೆಂಗಳೂರು: ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.





Leave a comment