Site icon Kannada News-suddikshana

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ

ಮೈಸೂರು: ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ರಾಜಮಾತೆ ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು ಸಭೆ ನಡೆಸುವುದು ಕಾನೂನುಬಾಹಿರ ಎಂದು ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.

Exit mobile version