ದಾವಣಗೆರೆ: ಕಳೆದ ಎರಡು-ಮೂರು ವರ್ಷಗಳಿಂದ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಯನ್ನು ಎಡಬಿಡಂಗಿಗಳು, ಹಿಂದೂ ವಿರೋಧಿಗಳು ಮತ್ತು ದೇವರನ್ನೇ ನಂಬದವರಿಂದ ಮಾಡಿಸುತ್ತಾ ನಾಡಹಬ್ಬದ ಪಾವಿತ್ರ್ಯತೆಯನ್ನು ಹಾಳು ಮಾಡಲಾಗಿತ್ತು. ಆದರೆ ಈ ಬಾರಿ ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ದಸರಾ ಉದ್ಘಾಟನೆ ಮಾಡಿಸುತ್ತಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಬಿಜೆಪಿ ಯುವ ನಾಯಕ ಹಾಗೂ ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ತಿಳಿಸಿದ್ದಾರೆ.
ಪೂಜ್ಯ ಸ್ವಾಮೀಜಿಗಳಿಂದ ದಸರಾ ಮಹೋತ್ಸವ ಉದ್ಘಾಟನೆಯಾಗುವುದರಿಂದ ನಾಡಹಬ್ಬಕ್ಕೆ ಇನ್ನಷ್ಟು ಮೆರುಗು ಬರಲಿದೆ. ಸನಾತನ ಧರ್ಮದ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ಇದರಿಂದಾಗಲಿದ್ದು, ತಡವಾಗಿಯಾದರೂ ಸರ್ಕಾರಕ್ಕೆ ಸದ್ಬುದ್ಧಿ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇವಲ ಸ್ವಾಮೀಜಿಗಳಿಂದ ಉದ್ಘಾಟನೆ ಮಾಡಿಸಿದರೆ ಸಾಲದು; ಈ ಬಾರಿಯ ದಸರಾದಲ್ಲಿ ಸಂಪೂರ್ಣವಾಗಿ ಹಿಂದೂ ಸಂಸ್ಕೃತಿಯನ್ನು ಹಾಗೂ ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಮಹಿಮೆಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು. ಎಡಬಿಡಂಗಿ ಚಿಂತನೆಗಳನ್ನು ಸಂಪೂರ್ಣವಾಗಿ ದೂರ ಇಡಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.





Leave a comment