ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Mysore Dasara: ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್: ನಾಡಹಬ್ಬದ ಸ್ಪೆಷಾಲಿಟಿಗಳು ಏನೇನಲ್ಲಾ ಇರಲಿದೆ ಈ ಬಾರಿ…?

On: July 31, 2023 3:32 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-07-2023

 

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಅಕ್ಟೋಬರ್ 15 ರಂದು ಬೆಳಿಗ್ಗೆ 10.15ರಿಂದ 10.30ಕ್ಕೆ ಸಲ್ಲುವ ಮುಹೂರ್ತದಲ್ಲಿ ಉದ್ಘಾಟನೆ ನೆರವೇರಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ.

ನಾಡಹಬ್ಬ ಮೈಸೂರು ದಸರಾ (Mysore Dasara) ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು. ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಡೆಸಲಾದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಸುದ್ದಿಯನ್ನೂ ಓದಿ:

Rain: ಮಳೆ ಮಳೆ… ಮಳೆನಾಡಾದ ಬೆಣ್ಣೆನಗರಿ, ಈ ಕ್ರಮಗಳ ಅನುಸರಿಸಿದರೆ ರೋಗಗಳಿಂದ ದೂರ ದೂರ ಗ್ಯಾರಂಟಿ… ಹಾಗಾದ್ರೆ ಓದಿ ಅನುಸರಿಸಿ ತಡಮಾಡ್ಬೇಡಿ…

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ:

ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಲಿದೆ.

ವಿಶಿಷ್ಟ ದೀಪಾಲಂಕಾರ:

ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯ ವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ವಸ್ತು ಪ್ರದರ್ಶನ:

ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, .ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು
ಸೂಚಿಸಲಾಯಿತು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ :

ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಪ್ರವಾಸೋದ್ಯಮಕ್ಕೆ ಒತ್ತು:

ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ. ಯಾರಿಗೂ ತೊಂದರೆಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು.

ಏರ್ ಶೋ :

ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

– ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.

– ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

– ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು

– ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

Mysore Dasara, Mysore Dasara Date, Mysore Dasara Jambu Savari,  Mysore Dasara Date Announce, Mysore Dasara Meeting, Mysore Dasara Meeting In Bangalore, Mysore, Mysore Nadahabba Dasara

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವಿಮಾನ ನಿಲ್ದಾಣ

ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಪ್ರವೇಶ ನಿರಾಕರಿಸಲಾಗಿದೆಯೇ? ಹಾಗಾದ್ರೆ ಈ ಕಾರಣಕ್ಕಾಗಿಯೇ!

ಸಹಾಯಧನ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: ಸಿಗಲಿದೆ 6,000 ರೂ. ಸಹಾಯಧನ

ಧರ್ಮಸ್ಥಳ

ಧರ್ಮಸ್ಥಳದಲ್ಲಿ ಕಾಣೆಯಾಗಿರುವ ಪುತ್ರಿ ಅನನ್ಯಾ ಹುಡುಕಿಕೊಡಿ ಎಂದಿದ್ದ ಸುಜಾತಾ ಭಟ್ ಬಗ್ಗೆ ಹೊರಬಿತ್ತು ಸ್ಫೋಟಕ ಮಾಹಿತಿ!

ದಸರಾ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ವಿರೋಧ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು: ಮೊಹಮ್ಮದ್ ಜಿಕ್ರಿಯಾ

ಶಿವಾಜಿ

“ಅಫ್ಜಲ್ ಗುರು ವಧೆ ಮಾಡುವ ಶಿವಾಜಿ ಮಹಾರಾಜರ ಪೋಸ್ಟರ್”: ತೆರವಿಗೆ ಪೊಲೀಸರು ಬರುತ್ತಿದ್ದಂತೆ ಮಟಿಕಲ್ ನಲ್ಲಿ ಉದ್ವಿಗ್ನ ವಾತಾವರಣ!

ಹಿಂದೂ

ಆ. 29ಕ್ಕೆ ಹಳೇಕುಂದುವಾಡಕ್ಕೆ ಹಿಂದೂ “ಫೈರ್” ಬಾಂಡ್ ಹಾರಿಕಾ ಮಂಜುನಾಥ್: ಯುವಕರಲ್ಲಿ ದೇಶಭಕ್ತಿ, ಸಂಸ್ಕೃತಿ ಮೂಡಿಸುವುದು ಹೇಗೆ? ವಿಷಯದ ಬಗ್ಗೆ ದಿಕ್ಸೂಚಿ ಭಾಷಣ

Leave a Comment