SUDDIKSHANA KANNADA NEWS/ DAVANAGERE/ DATE:12-04-2025
ದಾವಣಗೆರೆ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಅವರು ಏಪ್ರಿಲ್ 15, 16 ಮತ್ತು 17 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಏಪ್ರಿಲ್ 14 ರಂದು ರಾತ್ರಿ 8.30 ಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಏಪ್ರಿಲ್ 15 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಬಳಿ ಬ್ರಾಹ್ಮಣ ಹಾಸ್ಟೆಲ್ ಮುಂಭಾಗದಲ್ಲಿ ದಲಿತ ಸಂರಕ್ಷಣಾ ಸಮಿತಿಯಿಂದ ಹಮ್ಮಿಕೊಂಡಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಲ್ಲಿ ಭಾಗವಹಿಸುವರು. ಮ.1.30 ಕ್ಕೆ ಆವರಗೊಳ್ಳ ಗ್ರಾಮ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಹಿಂಭಾಗದಲ್ಲಿ ವಾಸಿಸುತ್ತಿರುವ ಕುಟುಂಬಗಳ ಸ್ಥಳಕ್ಕೆ ಭೇಟಿ ನೀಡುವರು. ನಂತರ ಸಂಜೆ 5 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡುವರು.
ಏಪ್ರಿಲ್ 16 ರಂದು ಬೆಳಿಗ್ಗೆ 10.30ಕ್ಕೆ ಜಗಳೂರು ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಜಗಳೂರು ತಾಲ್ಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡುವರು ನಂತರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಬಾಲಕಿಯರ ಮೆಟ್ರಿಕ್ ನಂತರ ಹಾಸ್ಟೆಲ್ಗೆ ಭೇಟಿ ನೀಡಿ ವಾಸ್ತವ್ಯ ಮಾಡುವರು.
ಏಪ್ರಿಲ್ 17 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಭೇಟಿ, ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಮ. 2 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮ.3 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು.
ಸಾರ್ವಜನಿಕರಿಂದ ಸಹವಾಲು ಸ್ವೀಕಾರ:
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌದರಿ ಅವರು ಏಪ್ರಿಲ್ 14 ರಿಂದ 17 ರವರೆಗೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಏಪ್ರಿಲ್ 16 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್ಹೆಚ್ಡಬ್ಲ್ಯೂ ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ, ಅಂಕಿ ಅಂಶಗಳೊಂದಿಗೆ ಚರ್ಚೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಅಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ಮೀಸಲಾತಿ, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತಂತೆ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಭೆಯ ನಂತರ ಸಂಜೆ 4 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.