ನಾಂಡೇಡ್: ಮಹಾರಾಷ್ಟ್ರದ ನಾಂಡೇಡ್ ಜಿಲ್ಲೆಯಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದ್ದು, 10 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 50 ವರ್ಷದ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪ್ರಾಂಶುಪಾಲ ರವಿ ಸೋನವಣೆ, ಶಾಲಾ ತರಗತಿಗಳು ಆರಂಭವಾಗುವ ಮುಂಚೆಯೇ ಬಾಲಕಿಯನ್ನು ಶಾಲೆಗೆ ಕರೆಸಿ ಈ ಕೃತ್ಯ ಎಸಗಿದ್ದಾರೆ. ಬಾಲಕಿ ಧೈರ್ಯ ಮಾಡಿ ವಿರೋಧಿಸಿ ಕಿರುಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ಬಳಿಕ ಬಾಲಕಿ ತನ್ನ ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೊ (POCSO) ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿದ್ದಾರೆ.
ಅದೇ ಜಿಲ್ಲೆಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯದ ಎರಡು ಪ್ರಕರಣಗಳು ವರದಿಯಾಗಿರುವುದು ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ತೀವ್ರ ಕಳಳವಳ ಮೂಡಿಸಿದೆ.





Leave a comment