SUDDIKSHANA KANNADA NEWS/DAVANAGERE/DATE:12_11_2025
ದಾವಣಗೆರೆ: ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ನರೇಗಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
READ ALSO THIS STORY: ಐಟಿ ಬಿಟಿ ಹಬ್ ಆಗಲಿದೆ ದಾವಣಗೆರೆ: 60 ದಿನಗಳಲ್ಲಿ10ಕ್ಕಿಂತ ಹೆಚ್ಚು ಐಟಿ ಕಂಪನಿಗಳ ಆಗಮನದ ನಿರೀಕ್ಷೆ!
ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.







