Site icon Kannada News-suddikshana

‘ಕಾಂಗ್ರೆಸ್, ರಾಜಕೀಯ ಲಾಭಕ್ಕಾಗಿ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿವೆ’ – ಪ್ರಧಾನಿ ಮೋದಿ

ನವದೆಹಲಿ:ಕಾಂಗ್ರೆಸ್, ರಾಜಕೀಯ ಲಾಭಕ್ಕಾಗಿ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೊಪಿಸಿದ್ದಾರೆ.

ಶ್ರೀನಗರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ರಾಜಕೀಯ ಲಾಭಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಯುವಕರ ಕೈಗೆ ಕಲ್ಲು ನೀಡುತ್ತಿವೆ ಮತ್ತು ಅವರ ಭವಿಷ್ಯವನ್ನು ಹಾಳುಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಪ್ರತಿಯೊಂದು ಶಕ್ತಿಯೂ ಪಿತೂರಿ ನಡೆಸುತ್ತಿದೆ. ಇಲ್ಲಿಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ,ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಾನು ಇಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಇಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಶಾಲಾ-ಕಾಲೇಜುಗಳು ಸುಗಮವಾಗಿ ನಡೆಯುತ್ತಿವೆ. ಮಕ್ಕಳ ಬಳಿ ಪೆನ್ನುಗಳು, ಪುಸ್ತಕಗಳು ಮತ್ತು ಲ್ಯಾಪ್‌ಟಾಪ್‌ಗಳಿವೆ. ಹೊಸ ಶಾಲೆಗಳು, ಹೊಸ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು ನಿರ್ಮಾಣವಾಗುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದರು.

Exit mobile version