ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರುನಾಡಲ್ಲಿ ಮತ್ತೆ ಅಬ್ಬರಿಸಿ ಬೊಬ್ಬಿರಿಯಲಿದ್ದಾರೆ ಮೋದಿ: ಬಿಜೆಪಿಗೆ ಆಗುತ್ತಾ ವರ್ಕೌಟ್…?

On: April 21, 2023 11:40 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-04-2023

ಬೆಂಗಳೂರು (BANGALORE): ಕರುನಾಡಲ್ಲಿ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ ಮುಗಿದಿದೆ. ಇನ್ನು ಉಳಿದಿರುವುದು ನಾಮಪತ್ರ ವಾಪಸ್ ಪಡೆಯುವುದು. ಆ ನಂತರ ವಿಧಾನಸಭಾ ಚುನಾವಣಾ ಕಣಾ ಮತ್ತಷ್ಟು ರಂಗೇರಲಿದೆ.

ಪ್ರಧಾನಿ ನರೇಂದ್ರ ಮೋದಿ (NARENDRA MODI)ಅವರು ಕರ್ನಾಟಕದಲ್ಲಿ ಸುಮಾರು 20 ಸ್ಥಳಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇದಕ್ಕಾಗಿ ಬಿಜೆಪಿ ಸಿದ್ಧತೆಯನ್ನೂ ಮಾಡಿಕೊಂಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಲಕ್ಷ್ಮಣ ಸವದಿ ಅವರು ಬಿಜೆಪಿ (BJP)ಬಿಟ್ಟು ಕಾಂಗ್ರೆಸ್ (CONGRESS) ಸೇರಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯದ ಮತ ಸೆಳೆಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು, ಈಗಾಗಲೇ ಈ ಸಂಬಂಧ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ್ದಾರೆ.

ಇತ್ತ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ(BJP)ಯ ಲಿಂಗಾಯತ ನಾಯಕರು ಕಾಂಗ್ರೆಸ್ ಪಕ್ಷವೇ ಮೋಸ ಮಾಡಿದ್ದು ಎಂಬ ಟ್ರಂಪ್ ಕಾರ್ಡ್ ಬಳಸುತ್ತಿದೆ. ಈ ನಡುವೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ ಭರ್ಜರಿ ಪ್ರಚಾರ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ.

“ಪ್ರಧಾನಿ ಸುಮಾರು 20 ಸ್ಥಳಗಳಲ್ಲಿ ಪ್ರಚಾರ ಮಾಡುವ ಎಲ್ಲಾ ಸಾಧ್ಯತೆಗಳಿವೆ”. ಹೆಚ್ಚಿನ ಸ್ಥಳಗಳಲ್ಲಿ ಅವರು ರ್ಯಾಲಿ-ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ. ಕೆಲವು ಕಡೆ ರೋಡ್ ಶೋಗಳು ಇರುತ್ತವೆ” ಎಂದು ಮುಖ್ಯಮಂತ್ರಿ ಬಸವರಾಜ್
ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರ ಪ್ರಬಲ ತಂಡವು ಚುನಾವಣೆಗೆ ಪಕ್ಷದ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.

ಕೇಂದ್ರ ಸಚಿವರಲ್ಲಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯಾ ಮತ್ತು ಪ್ರಲ್ಹಾದ್ ಜೋಶಿ ಸೇರಿದ್ದಾರೆ ಎಂದು ಪಕ್ಷವು ಬಿಡುಗಡೆ ಮಾಡಿದ ನಾಯಕರ ಪಟ್ಟಿ ತಿಳಿಸಿದೆ.

ಆದಿತ್ಯನಾಥ್ ಅವರ ಜೊತೆಗೆ ಕ್ರಮವಾಗಿ ಮಧ್ಯಪ್ರದೇಶ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಿಮಂತ ಬಿಸ್ವಾ ಶರ್ಮಾ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ವಾವಿಸ್ ಅವರನ್ನು ಸೇರಿಸಲಾಗಿದೆ.

ಬೊಮ್ಮಾಯಿ, ಕರ್ನಾಟಕ ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಕರ್ನಾಟಕದ ಕೆಲವು ಸಚಿವರು ಮತ್ತು ರಾಜ್ಯ ಪಕ್ಷದ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment