Site icon Kannada News-suddikshana

ವಾರಣಾಸಿ: ಇಂದು ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು (ಮಂಗಳವಾರ) ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಸಲಿಸುವುದಕ್ಕೂ ಮುನ್ನ ಗಂಗಾ ನದಿಯಲ್ಲಿ ಸ್ನಾನ ಮಾಡಲಿದ್ದಾರೆ. ಬಳಿಕ ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆಯಲಿದ್ದಾರೆ. ಮಂಗಳವಾರ ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಸಿದ್ಧಿ ಯೋಗ ಜೊತೆಗೆ ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದ್ದು, ಇದು ಉತ್ತಮ ಮಹತ್ವದ ದಿನ ಎಂದು ಅಯೋಧ್ಯ ರಾಮ ಮಂದಿರ ಶಂಕುಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಗಣೇಶ್ವರ ಶಾಸ್ತ್ರಿ ದ್ರಾವಿಡ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಮೋದಿಯವರ ನಾಮನಿರ್ದೇಶನಕ್ಕೆ ಬಿಜೆಪಿ ಬಿಜೆಪಿ ಸಭರ್ಜರಿ ತಯಾರಿ ನಡೆಸಿದೆ.

Exit mobile version