Site icon Kannada News-suddikshana

ಡಾ. ಜಿ. ಎಂ. ಸಿದ್ದೇಶ್ವರರ 74ನೇ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ ಪತ್ರ!

ನರೇಂದ್ರ ಮೋದಿ

SUDDIKSHANA KANNADA NEWS/ DAVANAGERE/ DATE_12-07_2025

ದಾವಣಗೆರೆ: ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರರವರ 74ನೇ ಜನ್ಮ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಕೆಯ ಪತ್ರ ಕಳುಹಿಸಿದ್ದಾರೆ. ಈ ಮೂಲಕ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ವಿರೋಧಿ ಬಣಕ್ಕೆ ನಡುಕ ಶುರುವಾಗಿದೆ.

ಈ ಸುದ್ದಿಯನ್ನೂ ಓದಿ: ದಾವಣಗೆರೆಯಲ್ಲಿ “ಮನೆ ಮನೆಗೆ ಪೊಲೀಸ್” ಪ್ರೊಗ್ರಾಂಗೆ ಸೋಮವಾರ ಚಾಲನೆ: ಏನೆಲ್ಲಾ ಪ್ರಯೋಜನಗಳಿವೆ?

ಈಗಾಗಲೇ ರಾಜ್ಯ ವರಿಷ್ಠರು ಎಂ. ಪಿ. ರೇಣುಕಾಚಾರ್ಯ ಸೇರಿದಂತೆ ಅವರ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ನಾಯಕರಿಗೆ ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂಬ ಫರ್ಮಾನು ಹೊರಡಿಸಲಾಗಿದೆ.

ಇದರ ಮುಂದುವರಿದ ಭಾಗ ಎಂಬಂತೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಭಾರತೀಯ ಜನತಾ ಪಕ್ಷದ ವಿಚಾರಗಳನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷದ ನಾಲ್ಕು ಗೋಡೆಯೊಳಗೆ
ಮಾತನಾಡುತ್ತೇನೆ. ಬಿಜೆಪಿ ಆಂತರಿಕ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸುವುದಿಲ್ಲ ಎಂದು ಹೇಳಿದ್ದಾರೆ.

ನಗರದ ಅಭಿನವ ರೇಣುಕಾ ಮಂದಿರದಲ್ಲಿ ಡಾ. ಜಿ. ಎಂ. ಸಿದ್ದೇಶ್ವರರ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆದಿತ್ತು. ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಅರವಿಂದ ಲಿಂಬಾವಳಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಪಾಲ್ಗೊಂಡು ರೇಣುಕಾಚಾರ್ಯ ಅಂಡ್ ಟೀಂ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಾತ್ರವಲ್ಲ, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಕಾರಣರಾದವರಿಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದರು. ಈ ಬೆಳವಣಿಗೆ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರೇ ಸಿದ್ದೇಶ್ವರ ಅವರಿಗೆ ಜನುಮದಿನದ ಶುಭಾಶಯ ಕೋರಿರುವುದು ಕುತೂಹಲ ಕೆರಳಿಸಿದೆ.

ತನ್ನ 74ನೇ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದೇಶ್ವರ ಅವರು ಧನ್ಯವಾದ ಸಲ್ಲಿಸಿದ್ದಾರೆ.

Exit mobile version