Home ದಾವಣಗೆರೆ ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಇಡಿ ಆರೋಪಪಟ್ಟಿ ವಜಾಗೊಳಿಸಿದ ಕೋರ್ಟ್!
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಇಡಿ ಆರೋಪಪಟ್ಟಿ ವಜಾಗೊಳಿಸಿದ ಕೋರ್ಟ್!

Share
ರಾಹುಲ್ ಗಾಂಧಿ
Share

SUDDIKSHANA KANNADA NEWS/DAVANAGERE/DATE:16_12_2025

ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ಸಲ್ಲಿಸಿದ ದೂರು ವಿಚಾರಣೆಗೆ ಅರ್ಹವಲ್ಲ ಎಂದು ನ್ಯಾಯಾಲಯ ಹೇಳಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ನ್ಯಾಯಾಲಯವು ಬಿಗ್ ರಿಲೀಫ್ ನೀಡಿದೆ. ಪ್ರಕರಣವು ಖಾಸಗಿ ದೂರನ್ನು ಆಧರಿಸಿದ್ದು, ಎಫ್ಐಆರ್ ಅಲ್ಲ ಎಂದು ಪ್ರತಿಪಾದಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಈ ಮೂಲಕ ರಿಲ್ಯಾಕ್ಸ್ ಆಗುವಂತಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣವನ್ನು ಪರಿಗಣಿಸಲು ನಿರಾಕರಿಸಿದೆ.

ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ, ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ದೂರು ಖಾಸಗಿ ದೂರನ್ನು ಆಧರಿಸಿದೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಅಲ್ಲದ ಕಾರಣ ಅದನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕುಟುಂಬದವರಲ್ಲದೆ, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಯಂಗ್ ಇಂಡಿಯನ್, ಡೋಟೆಕ್ಸ್ ಮರ್ಚಂಡೈಸ್ ಮತ್ತು ಸುನಿಲ್ ಭಂಡಾರಿ ಅವರನ್ನೂ ಜಾರಿ ನಿರ್ದೇಶನಾಲಯ (ಇಡಿ) ಆರೋಪಿಗಳನ್ನಾಗಿ ಮಾಡಿತ್ತು.

Share

Leave a comment

Leave a Reply

Your email address will not be published. Required fields are marked *