SUDDIKSHANA KANNADA NEWS/DAVANAGERE/DATE:05_11_2025
ದಾವಣಗೆರೆ: ರಾಜ್ಯ ಮಟ್ಟದ 14 ವರ್ಷದ ವಯೋಮಿತಿಯ ಕರಾಟೆ ಸ್ಪರ್ಧೆಯಲ್ಲಿ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣ್ ಬಾಬು ವಿಜೇತನಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
READ ALSO THIS STORY: ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ ಆಟೋಪೇ ನಿಯಮಗಳ ಕಂಪ್ಲೀಟ್ ಡೀಟೈಲ್ಸ್
ದಾವಣಗೆರೆಯಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 2024-25 ಸಾಲಿನ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 35 ರಿಂದ 40 ಕೆಜಿ ತೂಕದ ವಿಭಾಗದಲ್ಲಿ ತರುಣ್ ಬಾಬು ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾನೆ ಎಂದು ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್ ತಿಳಿಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತರುಣ್ ಬಾಬುಗೆ ಶಾಲಾಡಳಿತ ಮಂಡಳಿಯ ಅಧ್ಯಕ್ಷೆ ಕೆ.ಆರ್. ಸುಜಾತ ಕೃಷ್ಣ, ಕಾರ್ಯದರ್ಶಿ ಎ. ಆರ್. ಉಷಾ ರಂಗನಾಥ್, ಎಲ್ಲಾ ಪದಾಧಿಕಾರಿಗಳು ಮತ್ತು ಪ್ರಾಂಶುಪಾಲರಾದ ಕೆ. ಎಸ್. ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಜಿ. ಎಸ್. ಶಶಿರೇಖಾ, ತರಬೇತಿ ನೀಡಿದ ಶಾಲಾ ದೈಹಿಕ ಶಿಕ್ಷಣದ ಶಿಕ್ಷಕ ಕೆ.ರವಿ, ನಾಗರಾಜ್ ಉತ್ತುಂಗಿ, ಎಂ.ಪ್ರಸನ್ನ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.


