NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಕಣ್ಗಾವಲು ಸಹಾಯಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಜೂನ್ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 29, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 5,200-20,200
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಉಪ ನಿರ್ದೇಶಕರು (ಆಡಳಿತ)
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
2 ನೇ ಮಹಡಿ
ಆಗಸ್ಟ್ ಕ್ರಾಂತಿ ಭವನ
ಭಿಕಾಜಿ ಕಾಮಾ ಪ್ಲೇಸ್
ನವದೆಹಲಿ-110066
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 29, 2024