Site icon Kannada News-suddikshana

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಬೇಕಾ… ಹಾಗಿದ್ದರೆ ಸಲ್ಲಿಸಿ ಅರ್ಜಿ.. ಫೆ.29ರೊಳಗೆ ಪ್ರಮಾಣ ಪತ್ರ ಅಪ್ಲೋಡ್ ಮಾಡಿ

SUDDIKSHANA KANNADA NEWS/ DAVANAGERE/ DATE:23-02-2024

ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಬೇಕಾ… ಹಾಗಿದ್ದರೆ ಸಲ್ಲಿಸಿ ಅರ್ಜಿ.. ಫೆ.29ರೊಳಗೆ ಪ್ರಮಾಣ ಪತ್ರ ಅಪ್ಲೋಡ್ ಮಾಡಿ.

2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ.2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (ಎಸ್ಎಸ್ಪಿ) ವಿದ್ಯಾರ್ಥಿಗಳ ಲಾಗಿನ್ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮದಡಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಹೊಸದಾಗಿ ಸ್ವೀಕೃತವಾಗುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಸರ್ಕಾರದ ಆದೇಶದಂತೆ ಕೊನೆಯ ದಿನಾಂಕವನ್ನು ನಿಗಧಿಪಡಿಸಲಾಗಿರುತ್ತದೆ.

2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ (ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗುವುದಿಲ್ಲ.

ಫೆಬ್ರವರಿ, 29 ರೊಳಗೆ ಪ್ರಮಾಣ ಪತ್ರವನ್ನು ಅಪ್ಲೋಡ್ (upload)) ಮಾಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Exit mobile version