Home ಕ್ರೈಂ ನ್ಯೂಸ್ ದೇಶದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕಲ್ಲು ಹಾಕಿದ ಕೇಂದ್ರ ಸರ್ಕಾರ: ಸೈಯದ್ ಖಾಲಿದ್ ಅಹ್ಮದ್ ಆರೋಪ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದೇಶದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕಲ್ಲು ಹಾಕಿದ ಕೇಂದ್ರ ಸರ್ಕಾರ: ಸೈಯದ್ ಖಾಲಿದ್ ಅಹ್ಮದ್ ಆರೋಪ

Share
ದೇಶ
Share

ದಾವಣಗೆರೆ: ನೀಟ್ – ಯುಜಿ ಪರೀಕ್ಷೆ ರದ್ದುಗೊಳಿಸುವ ಮೂಲಕ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೇಂದ್ರ ಸರ್ಕಾರವು ಕಲ್ಲು ಹಾಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆಯನ್ನು ರದ್ದುಗೊಳಿಸಿದೆ. ನೀಟ್ – ಯುಜಿ
ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಎಚ್ಚರ ವಹಿಸದೇ ಇರುವುದು ದುರಂತದ ಸಂಗತಿ ಎಂದು ಹೇಳಿದ್ದಾರೆ.

ಸುಮಾರು 23 ಲಕ್ಷದಷ್ಟು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರೀಕ್ಷೆ ರದ್ದುಗೊಳಿಸಿರುವುದು ಆತಂಕ ತರುವ ಜೊತೆಗೆ ದುಗುಡವನ್ನು ಹೆಚ್ಚಿಸಿದೆ. ಪರೀಕ್ಷೆ ತೆಗೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿಯೂ ಹಾಗೂ
ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ ರಾಷ್ಟ್ರೀಯ ಅರ್ಹತ್ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿರುವುದರಿಂದ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಸೀಟು ಹಂಚಿಕೆಯೂ ವಿಳಂಬವಾಗುವ ಸಾಧ್ಯತೆ ಇದ್ದು,
ವಿದ್ಯಾರ್ಥಿಗಳ ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರವು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದಾರೆ. ಇದು ಕೇಂದ್ರ ಸರ್ಕಾರದ ನಿರ್ಲಕ್ಷ್ಯದ, ಬೇಜವಾಬ್ದಾರಿಯ
ಪರಮಾವಧಿ ಎಂದು ಆರೋಪಿಸಿದ್ದಾರೆ.

ಪರೀಕ್ಷೆಗಾಗಿ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ವಹಿಸಿದ್ದರು. ಕನಸು ಕಟ್ಟಿಕೊಂಡು ಪರೀಕ್ಷೆ ಬರೆದಿದ್ದರು. ಆದರೆ ದೇಶಾದ್ಯಂತ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ವಿದ್ಯಾರ್ಥಿ ಸಮೂಹ ಹಾಗೂ ಪೋಷಕರು ಕ್ಷಮಿಸುವುದಿಲ್ಲ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *