ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಡಿಸಿ ಭರವಸೆಗೆ ಒಪ್ಪದ ರೈತರು: ಸಭೆ ಬಹಿಷ್ಕರಿಸಿ ದಾವಣಗೆರೆ ಜಿಲ್ಲೆಯಾದ್ಯಂತ ರಸ್ತೆ ತಡೆ ಚಳವಳಿಗೆ ಕರೆ!

On: May 16, 2025 7:45 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-16-05-2025

ದಾವಣಗೆರೆ: ಭತ್ತವನ್ನು ಕನಿಷ್ಟ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತೆ ಆದೇಶ ಹೊರಡಿಸಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ತಾತ್ಸಾರ ಮನೋಭಾವನೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ ಬಣ ಸಭೆಯನ್ನೆ ಬಹಿಷ್ಕರಿಸಿ ಜಿಲ್ಲಾದ್ಯಂತ ರಸ್ತೆ ತಡೆ ಚಳುವಳಿಗೆ ಕರೆ ನೀಡಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಿಗದಿಯಾಗಿತ್ತು. ರಾಜ್ಯ ರೈತ ಸಂಘ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ರೈತರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ಅವರು ಸಭೆಯನ್ನು ಸೋಮವಾರ ಅಥವಾ ಮಂಗಳವಾರ ಮಾಡೋಣ ಎಂದು ಸಬೂಬು ಹೇಳಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ರೈತರು, ಕೃಷಿ ಸಚಿವರು ಅಥವಾ ಸಿಎಂ ನೇತೃತ್ವದಲ್ಲಿ ಸಭೆ ಕರೆದು ಅಲ್ಲಿ ಈ ಸಮಸ್ಯೆ ಬಗೆಹರಿಯಬೇಕು ಎಂದು ಪಟ್ಟು ಹಿಡಿದರು. ಆದರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ. ಸೋಮವಾರ ಅಥವಾ ಮಂಗಳವಾರ
ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರು, ಆ ವೇಳೆಗಾಗಲೇ ಶೇ.50 ರಷ್ಟು ಭತ್ತ ಖಾಲಿಯಾಗಿರುತ್ತವೆ. ಹಾಗಾಗಿ ಇಂದೇ ಕೃಷಿ ಸಚಿವರ ಬಳಿ ಮಾತನಾಡಿ ನಾಳೆ ಸಭೆ ನಿಗದಿಪಡಿಸಬೇಕು ಅಥವಾ ಸಿಎಂ ಜೊತೆ ಮಾತನಾಡಿ ಸಹಾಯಧನದ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಾಯಿತು. ಆದರೆ ಜಿಲ್ಲಾಧಿಕಾರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಸಭೆಯನ್ನು ಬಹಿಷ್ಕರಿಸಲಾಯಿತು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಸರ್ಕಾರಕ್ಕೆ ರೈತರ ಹಿತಾಸಕ್ತಿಗಿಂತ ಖರೀದಾರರ ಹಿತಾಸಕ್ತಿಯೆ ಮುಖ್ಯವಾಗಿದೆ. ಹಾಗಾಗಿ ಈ ವಿಚಾರದಲ್ಲಿ ಆದೇಶ ಹೊರಡಿಸಲು ಮೀನಾಮೇಷ ಎಣಿಸುತ್ತಿದೆ. 2-3 ದಿನ ತಡವಾದರೂ ಕೂಡ ರೈತರು ಶೇ.50 ರಷ್ಟು ಭತ್ತ ಮಾರಾಟ ಮಾಡಿರುತ್ತಾರೆ. ಈ ಹಿನ್ನೆಲೆಯಲ್ಲಿ ತುರ್ತಾಗಿ ಸಭೆ ಕರೆದು ಸ್ಪಷ್ಪ ಆದೇಶ ಹೊರಡಿಸಬೇಕೆನ್ನುವುದು ಸಂಘದ ಬೇಡಿಕೆಯಾಗಿದೆ.ಆದರೆ ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜಿಲ್ಲಾದ್ಯಂತ ಎಲ್ಲ ರೈತರು ತಮ್ಮ ಗ್ರಾಮಗಳಲ್ಲಿಯೇ ರಸ್ತೆತಡೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಕರೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಲೋದಹಳ್ಳಿ ರವಿಕುಮಾರ್, ಚನ್ನಸಮುದ್ರ ಭೀಮಣ್ಣ, ಆನಗೋಡು ಭೀಮಣ್ಣ, ಗಂಡುಗಲಿ, ಹರಿಹರದ ಗರಡಿ ಮನೆ ಬಸವರಾಜ್, ಯರವನಾಗತಿಹಳ್ಳಿ ರುದ್ರಪ್ಪ, ಹೂವಿನ ಮಡು ನಾಗರಾಜ್, ಮರಡಿ ಸತೀಶ್ ಸೇರಿದಂತೆ ಸಂಘದ ಅನೇಕ ಮುಖಂಡರು ಭಾಗವಹಿಸಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment