Site icon Kannada News-suddikshana

Siddaramaiah: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು: ಸಿಎಂ ಸಿದ್ದರಾಮಯ್ಯ ಘೋಷಣೆ

Siddaramaiah Rice

Siddaramaiah Rice

SUDDIKSHANA KANNADA NEWS/ DAVANAGERE/ DATE:14-08-2023

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ: 

Sulekere Big Story: ಕುಡಿಯಲು ಯೋಗ್ಯವಲ್ಲ ಸೂಳೆಕೆರೆ ನೀರು: ಜೀವಜಲಚರ, ಕೃಷಿಗೆ ಕಂಟಕನಾ? ಆತಂಕದಲ್ಲಿ ಮತ್ಸ್ಯ ಪ್ರಿಯರು, ರೈತಾಪಿ ವರ್ಗ…!

ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ತಿಳಿಸಿದರು.

NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.

Exit mobile version