Site icon Kannada News-suddikshana

ಊಟದ ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ವಿದ್ಯಾರ್ಥಿಯನ್ನು ಅಮಾನತು ಮಾಡಿದ ಮುಖ್ಯೋಪಾಧ್ಯಾಯ

ನವದೆಹಲಿ: ಊಟದ ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ತರಗತಿಗೆ ಮಾಂಸಾಹಾರ ತಂದ ಆರೋಪದ ಮೇಲೆ ಐದು ವರ್ಷದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ್ದಾರೆ. ವಿದ್ಯಾರ್ಥಿಯು ಟಿಫಿನ್ ಬಾಕ್ಸ್‌ನಲ್ಲಿ ಬಿರಿಯಾನಿ ತಂದಿದ್ದಾನೆ. ಇದನ್ನು ನೋಡಿದ ಪ್ರಾಂಶುಪಾಲ ಆ ವಿದ್ಯಾರ್ಥಿಯನ್ನು ಹೊರಹಾಕಿದ್ದಾರೆ.

ಗುರುವಾರ ಶಾಲಾ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಯ ತಾಯಿಯ ನಡುವಿನ ಮಾತಿನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಮ್ರೋಹಾದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ ಸುಧೀರ್ ಕುಮಾರ್ ಮಾತನಾಡಿ, ಆರೋಪಗಳ ಕುರಿತು ತನಿಖೆ ನಡೆಸಿ, ಅದರ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Exit mobile version