ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ತೆರಳಿದರು.
ವಿಲ್ಮಿಂಗ್ಟನ್ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸುತ್ತಿದ್ದಾರೆ. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಅಮೆರಿಕ ಪ್ರವಾಸದ ವೇಳೆ ಕ್ವಾಡ್ ಶೃಂಗಸಭೆ, ಸಮುದಾಯ ಕಾರ್ಯಕ್ರಮ, ಮತ್ತು ಇತರ ದ್ವಿಪಕ್ಷೀ ಯ ಸಭೆಗಳಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋ ದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸೆ.22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ.23ರಂದು ಅವರು ವಿಶ್ವಸಂಸ್ಥೆಯಲ್ಲಿ ವಿವಿಧ ದೇಶಗಳ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.