SUDDIKSHANA KANNADA NEWS/ DAVANAGERE/ DATE:01-01-2025
ದಾವಣಗೆರೆ: ಹೊಸ ವರ್ಷ ಸಂಭ್ರಮಾಚರಣೆ ಸಂದರ್ಭದಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ನೂತನ್ ಕಾಲೇಜು ಮುಂಭಾಗ ನಡೆದಿದೆ.
ನಿಟ್ಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್ತಿಕ್ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.