ದಾವಣಗೆರೆ: 2025 ವರ್ಷ ಮುಗಿದು 2026 ಬರುತ್ತಿದೆ. ಆಯೋಜಕರು ನಾನಾ ರೀತಿಯಲ್ಲಿ ಹೊಸ ವರ್ಷ ಬರಮಾಡಿಕೊಳ್ಳಲು ಕಾರ್ಯಕ್ರಮ ಆಯೋಜನೆ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಹೊಸ ವರ್ಷಾಚರಣೆ ಆಯೋಜಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.
ಈ ಸುದ್ದಿಯನ್ನೂ ಓದಿ: ದಾವಣಗೆರೆ ಡ್ರಗ್ಸ್ ಕೇಸಲ್ಲಿ ಕಂಟ್ರ್ಯಾಕ್ಟರ್ ಗಳು, ಎಳನೀರು, ಪ್ಲೈವುಡ್ ವ್ಯಾಪಾರಿ ಬಂಧನ: ಆರೋಪಿಗಳಿಂದ ವಶಪಡಿಸಿಕೊಂಡಿದ್ದೇನು?
2026ಕ್ಕೆ ಹೆಜ್ಜೆ ಇಡುತ್ತಿರುವ ದಾವಣಗೆರೆ ಜಿಲ್ಲೆಯ ಸಮಸ್ತ ಜನತೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಹೊಸ ವರ್ಷ 2026 ರ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಹೊಸ ವರ್ಷ ದಾವಣಗೆರೆ ಜನತೆಯಲ್ಲಿ ಹೊಸ ಹುರುಪು, ಉಲ್ಲಾಸ, ಸಂತೋಷ, ಬದುಕಿನಲ್ಲಿ ಹೊಸ ಗುರಿ ಆಲೋಚನೆಗಳು ಈಡೇರಲಿ, ಭರವಸೆಯ ಬದುಕಿಗೆ ನಾಂದಿ ಹಾಡಲಿ ಎಂದು ಆಶಿಸಿದೆ.
ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳೇನು?
ಡಿಸೆಂಬರ್ 31ರಂದು ರಾತ್ರಿ 2026 ನೇ ಸಾಲಿನ ಈ ಹೊಸ ವರ್ಷ ಆಚರಣೆ ಸಂಧರ್ಭದಲ್ಲಿ ದಾವಣಗೆರೆ ಜಿಲ್ಲಾ ಪೋಲಿಸ್ ವತಿಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಹೊಸ ವರ್ಷಾಚರಣೆ ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ ಆಯೋಜಕರು, ಸಂಘಟನೆಗಳು ಮತ್ತು ಸಾರ್ವಜನಿಕರು ಪೊಲೀಸ್ ಇಲಾಖೆಯು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಹೊಸ ವರ್ಷಾಚರಣೆಯಲ್ಲಿ ಪಾಲಿಸಬೇಕಾದ ನಿಯಮಗಳು:
ಹೊಸ ವರ್ಷಾಚರಣೆಯನ್ನು ಕಾರ್ಯಕ್ರಮದ ಆಯೋಜಕರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ಮುಕ್ತಾಯ ಮಾಡಬೇಕು.
ಹೊಸ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿ, ಕುಡಿದು ವಾಹನ ಚಾಲನೆ ಮಾಡುವಂತಿಲ್ಲ.
ವಾಹನಗಳಲ್ಲಿ ಹೆಚ್ಚಿನ ಜನರು ಸವಾರಿ ಮಾಡಬಾರದು
ವ್ಹೀಲಿಂಗ್ ಮಾಡುವುದು ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹೊಸ ವರ್ಷಾಚರಣೆ ಸಮಯದಲ್ಲಿ ಅಕ್ಕಪಕ್ಕದ ಜನರಿಗೆ ತೊಂದರೆ ಆಗದಂತೆ ವಿಶೇಷವಾಗಿ ಆಸ್ಪತ್ರೆಗಳು, ಅಪಾರ್ಟ್ಮೆಂಟ್‌ಗಳ ಸುತ್ತಮುತ್ತ ಮತ್ತು ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು.
ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.





Leave a comment