Site icon Kannada News-suddikshana

ಅಮೇರಿಕಾದಲ್ಲಿ ಸಾಮೂಹಿಕ ಗುಂಡಿನ ದಾಳಿ; ಓರ್ವ ಸಾವು, 6 ಮಂದಿಗೆ ಗಾಯ

ನ್ಯೂಯಾರ್ಕ್: ಸಾಮೂಹಿಕ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿರುವ ಘಟನೆ ನ್ಯೂಯಾರ್ಕ್​ನ ರೋಚೆಸ್ಟರ್‌ನಲ್ಲಿ ಭಾನುವಾರ ನಡೆದಿದೆ.

ಭಾನುವಾರ ಸಂಜೆ ರೋಚೆಸ್ಟರ್‌ನ ಮ್ಯಾಪಲ್‌ವುಡ್ ಪಾರ್ಕ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಗಾಯಗೊಂಡ 6 ಮಂದಿಯ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಭಾನುವಾರವಾದ ಕಾರಣ ಪಾರ್ಕ್‌ನಲ್ಲಿ ಮಕ್ಕಳು ಸೇರಿ ನೂರಾರು ಮಂದಿ ಸೇರಿದ್ದರು. ಇದೇ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಗೆ ಜನರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಆದರೂ ದುರಾದೃಷ್ಟವಶಾತ್ ಓರ್ವ ಸಾಪನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತರ ಸಂಖ್ಯೆ ಅಥವಾ ಮೃತರದ ಬಗ್ಗೆ ಪೊಲೀಸರು ಇನ್ನೂ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Exit mobile version