SUDDIKSHANA KANNADA NEWS/ DAVANAGERE/ DATE:18-03-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿರುದ್ಧ ಬುಸುಗುಟ್ಟಿರುವ ಭಿನ್ನಮತೀಯರಿಗೆ ಠಕ್ಕರ್ ಕೊಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದು ಅದ್ಧೂರಿ ಸ್ವಾಗತ ಕೋರಲಾಯಿತು. ಶಿವಮೊಗ್ಗದ ಸೋಗಾನೆಯ ವಿಮಾನ ನಿಲ್ದಾಣದಿಂದ ಆಗಮಿಸಿದ ನರೇಂದ್ರ ಮೋದಿ ಅವರು ತೆರೆದ ವಾಹನದಲ್ಲಿ ವೇದಿಕೆಯತ್ತ ಆಗಮಿಸಿದರು.
ಈ ವೇಳೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ನರೇಂದ್ರ ಮೋದಿ ಅವರ ಅಕ್ಕ ಪಕ್ಕದಲ್ಲಿ ನಿಂತದ್ದುವ ವಿಶೇಷವಾಗಿತ್ತು. ಪ್ರಧಾನಿ ಪಕ್ಕದಲ್ಲಿ ಗಾಯತ್ರಿ ಸಿದ್ದೇಶ್ವರ ಹಾಗೂ ಬಿ. ವೈ. ರಾಘವೇಂದ್ರ ಅವರನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು ತೆರೆದ ವಾಹನದಲ್ಲಿ ಆಗಮಿಸುವ ಮೂಲಕ ಭಿನ್ನಮತೀಯರಿಗೆ ಠಕ್ಕರ್ ನೀಡಲಾಗಿದೆ.
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರು ಈ ಮೂಲಕ ಬಂಡೆದ್ದಿರುವ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದರು. ಈ ವೇಳೆ ಗಾಯತ್ರಿ ಸಿದ್ದೇಶ್ವರ ಹಾಗೂ ರಾಘವೇಂದ್ರ ಅವರನ್ನು ಅಕ್ಕಪಕ್ಕದಲ್ಲಿ ನಿಲ್ಲಿಸಿಕೊಂಡು ಕೈ ಮುಗಿಯುತ್ತಾ ಲಕ್ಷಾಂತರ ಜನರಿಗೆ ಮೋದಿ ಅವರು ನಮಸ್ಕರಿಸಿದ್ದು ಗಮನ ಸೆಳೆಯಿತು.
ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬಿಜೆಪಿ ಪ್ರಚಾರ ಸಭೆಯಲ್ಲಿನರೇಂದ್ರ ಮೋದಿ ಅವರು ಶಿವಮೊಗ್ಗ, ಉಡುಪಿ – ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಅಭ್ಯರ್ಥಿಗಳು ಆಗಮಿಸಿದ್ದರು. ಆದ್ರೆ, ಹೆಚ್ಚಾಗಿ ಗಾಯತ್ರಿ ಸಿದ್ದೇಶ್ವರ ಹಾಗೂ ರಾಘವೇಂದ್ರ ಅವರನ್ನು ಮೋದಿ ಪಕ್ಕದಲ್ಲಿದ್ದು ಗಮನ ಸೆಳೆದರು.
ಗಾಯತ್ರಿ ಸಿದ್ದೇಶ್ವರ ಹಾಗೂ ಬಿ. ವೈ. ರಾಘವೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ನಿಂತು ಲಕ್ಷಾಂತರ ಜನರಿಗೆ ಕೈ ಮುಗಿಯುತ್ತಲೇ ತೆರೆದ ಜೀಪಿನಲ್ಲಿ ಬಂದರು. ಈ ಮೂಲಕ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಹಾಗೂ ದಾವಣಗೆರೆಯ ಹೊನ್ನಾಳಿ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ಭಿನ್ನರಿಗೆ ಠಕ್ಕರ್ ನೀಡಲಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಉಡುಪಿ – ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿಗಳು ಬಂದಿದ್ದರೂ ಮೋದಿ ಜೊತೆಗೆ ತೆರೆದ ವಾಹನದಲ್ಲಿ ಬರಲಿಲ್ಲ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸೇರಿದಂತೆ ಯಾವೊಬ್ಬ ನಾಯಕರು ಬರಲಿಲ್ಲ.
ದಾವಣಗೆರೆ ಹಾಗೂ ಶಿವಮೊಗ್ಗ ಬಿಜೆಪಿಯಲ್ಲಿ ಭಿನ್ನಮತ ಧಗಧಗಿಸುತ್ತಿದೆ. ಆದ್ರೆ, ಎಲ್ಲಾ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಮಾತು ಹೇಳುತ್ತಲೇ ಇದ್ದಾರೆ. ಕೆ. ಎಸ್. ಈಶ್ವರಪ್ಪ ಅವರೂ ಇದನ್ನೇ ಹೇಳುತ್ತಿದ್ದಾರೆ. ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ರೇಣುಕಾಚಾರ್ಯ ಸೇರಿದಂತೆ ಎಲ್ಲಾ ನಾಯಕರು ನರೇಂದ್ರ ಮೋದಿ ಅವರೇ ಮೂರನೇ ಬಾರಿ ದೇಶದ ಚುಕ್ಕಾಣಿ ಹಿಡಿಯಬೇಕು ಎಂದು ಹೇಳುತ್ತಿದ್ದಾರೆ. ಹಾಗಾಗಿ, ಅವರಿಗೆಲ್ಲಾ ಸರಿಯಾದ ರೀತಿಯಲ್ಲಿ ಎಚ್ಚರಿಕೆ ನೀಡಲು ಈ ವ್ಯವಸ್ಥೆ
ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ತೆಲಂಗಾಣದಲ್ಲಿ ಪ್ರಚಾರ ಸಭೆ ಮುಗಿಸಿ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದರು. ಮೋದಿ ಸ್ವಾಗತಕ್ಕೆ ಸಜ್ಜಾಗಿದ್ದ ಮಲೆನಾಡಿನಲ್ಲಿ ಮೋದಿ ಸುನಾಮಿಯೇ ಎದ್ದಿತ್ತು. ಲಕ್ಷಾಂತರ ಜನರು ಪಾಲ್ಗೊಂಡಿದ್ದರು. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಪಕ್ಷದ ಲಕ್ಷಾಂತರ ಕಾರ್ಯಕರ್ತರು ಆಗಮಿಸಿದ್ದರು.