SUDDIKSHANA KANNADA NEWS/ DAVANAGERE/ DATE:27-10-2023
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ, ರಾಜ್ಯದಲ್ಲಿ ಬೆಚ್ಚಿ ಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಈ ನಡುವೆ ಮತ್ತೆ ಇಬ್ಬರು ಆರೋಪಿಗಳ ಪತ್ತೆಗೆ 2 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಎನ್ ಐ ಎ ಈ ಘೋಷಣೆ ಮಾಡಿದ್ದು, ಮಾಹಿತಿ ನೀಡಿದವರಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.
NIAಯಿಂದ ಇಂದು ಒಟ್ಟು ಮೂರು ರಿವಾರ್ಡ್ ವಾಂಟೆಡ್ ನೋಟೀಸ್ ಬಿಡುಗಡೆ ಮಾಡಲಾಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 2 ನೇ ಆರೋಪಿ ಅಬ್ದುಲ್ ನಾಸೀರ್ ಸುಳಿವಿಗೆ 2 ಲಕ್ಷ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಈತ. ಆರೋಪಿ ನಂ 24 ಅಬ್ದುಲ್ ರಹಮಾನ್ ಸೋಮವಾರಪೇಟೆ ತಾಲೂಕಿನ ಕಲಕಂದೂರ್ ಗ್ರಾಮದ ನಿವಾಸಿ. ಆರೋಪಿ ನಂ 23 ನೌಷಾದ್ ನ ಸುಳಿವಿಗೆ 2 ಲಕ್ಷ ಬಹುಮಾನ ಘೋಷಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ಹಮೀದ್ ಮಗ ನೌಷಾದ್. ಮೂವರು ಕೂಡ ನಿಷೇಧಿದಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಸದಸ್ಯರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿತ್ತು. ಅದರಲ್ಲಿಯೂ ಅಧಿಕಾರದಲ್ಲಿದ್ದ ಬಿಜೆಪಿ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಆ ಬಳಿಕ ಎನ್ ಐ ಎ ತನಿಖೆಗೆ ಒಪ್ಪಿಸಲಾಗಿತ್ತು. ಆ ನಂತರ ಎನ್ ಐ ಎ ತನಿಖೆ ಬಿಗಿಗೊಳಿಸಿ, ಆರೋಪಿಗಳನ್ನೂ ಬಂಧಿಸಿತ್ತು. ಈಗ ಸಿಗದಿರುವ ಹಂತಕರ ಜಾಡು ಪತ್ತೆ ಹಚ್ಚಲು 2 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಮಾಹಿತಿ ನೀಡಿದವರ ಗುರುತು, ಹೆಸರು ಬಹಿರಂಗಗೊಳಿಸುವುದಿಲ್ಲ ಎಂದೂ ಸಹ ಎನ್ ಐ ಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.