Site icon Kannada News-suddikshana

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕ, ಮದುವೆಯಲ್ಲಿ ಗಿಫ್ಟ್ ಕೊಟ್ಟಿದ್ದರು: Nikhil Kumar ಸ್ಪಷ್ಟನೆ

SUDDIKSHANA KANNADA NEWS/ DAVANAGERE/ DATE:25-10-2023

ಬೆಂಗಳೂರು: ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು  ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಪುತ್ರ ಹಾಗೂ ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumar) ಸ್ಪಷ್ಟನೆ ನೀಡಿದ್ದಾರೆ.

Read Also This Story:

ವನ್ಯಜೀವಿ ಸಂರಕ್ಷಣಾ ಕಾಯ್ದೆ ಯಾವ್ಯಾವಾಗ ತಿದ್ದುಪಡಿಯಾಗಿದೆ…? ಈಶ್ವರ್ ಖಂಡ್ರೆ ಕೊಟ್ಟ ಎಚ್ಚರಿಕೆ ಏನು…?

ಈ ಸಂಬಂಧ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು
ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ
ಖಂಡಿತಾ ಅರಿವಿದೆ ಎಂದು ಹೇಳಿದ್ದಾರೆ.

Exit mobile version