Home ಕ್ರೈಂ ನ್ಯೂಸ್ ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ನಟ ಚೇತನ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರುಸಿನಿಮಾ

ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ನಟ ಚೇತನ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

Share
ನಿಖಿಲ್ ಕುಮಾರಸ್ವಾಮಿ
Share

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಎಂದರೆ ಕೇವಲ ಒಬ್ಬ ನಟರಲ್ಲ, ಅವರು ಆರು ಕೋಟಿ ಕನ್ನಡಿಗರ ಭಾವನೆ. ಕೋಟಿ ಕನ್ನಡಿಗರ ಆರಾಧ್ಯ ದೈವ ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ನಿಮ್ಮ ಅಹಂಕಾರದ ಪರಮಾವಧಿ. ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ ಎಂದು ಜೆಡಿಎಸ್ ಯುವ ನಾಯಕ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು, ನಟ ಚೇತನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜ, ಆದರೆ ಅವುಗಳಿಗೆ ಒಂದು ಘನತೆ ಇರಬೇಕು. ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ಸಮಾಜದಲ್ಲಿ ದ್ವೇಷ ಬಿತ್ತುವ ವ್ಯಕ್ತಿಗಳಲ್ಲ ಎಂದಿದ್ದಾರೆ.

ಸಂಸ್ಕಾರ ಮನೆಯಿಂದ ಬರಬೇಕು, ಟೀಕೆಗಳು ಜನರ ಪ್ರೀತಿಯ ಅಡಿಪಾಯದ ಮೇಲಿರಬೇಕು; ಕೇವಲ ಪ್ರಚಾರದ ಹಪಾಹಪಿಯಿಂದಲ್ಲ! ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles