ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ

On: September 28, 2024 11:03 AM
Follow Us:
---Advertisement---

ಬೆಂಗಳೂರು:- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ. ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆರ್ ಜೆಡಿ

ಆರ್ ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಸೀಟು ಹಂಚಿಕೆಯಲ್ಲಿ ಬಿರುಕು: ಚಿಹ್ನೆ ವಾಪಸ್ ಪಡೆದ ಲಾಲೂ ಯಾದವ್ ಪಕ್ಷ!

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Leave a Comment