Site icon Kannada News-suddikshana

ಚುನಾವಣೆಯಲ್ಲಿ ರಾಜಕಾರಣ ಮಾಡೋಣ, ನಾಡಹಬ್ಬದ ವಿಚಾರದಲ್ಲಿ ಬೇಡ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

SUDDIKSHANA KANNADA NEWS/ DAVANAGERE/DATE:22_09_2025

ಮೈಸೂರು: ಗೋಡಾ ಹೈ-ಮೈದಾನ್ ಹೈ. ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು.

READ ALSO THIS STORY: ಅಸ್ತ್ರಗಳಿಂದಲ್ಲ ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ ಪ್ರೀತಿಯಿಂದ ಬದುಕು ಅರಳಿಸಬಹುದು: ಬಾನು ಮುಷ್ತಾಕ್

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಹೇಳಿದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ಹೇಳಿದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.

Exit mobile version