SUDDIKSHANA KANNADA NEWS/ DAVANAGERE/ DATE:17-01-2025
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪ ಇಲ್ಲಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆ. ಎನ್. ರಾಜಣ್ಣ ಸೇರಿದಂತೆ ಈ ಬಗ್ಗೆ ಧ್ವನಿ ಎತ್ತಿದವರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಬೆಳಗಾವಿಯಲ್ಲಿ ಎದ್ದಿರುವ ಸತೀಶ್ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಗಲಾಟೆಯ ಸಂಬಂಧ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯರ ಬೆಂಬಲಿಗರ ನಡುವಿನ ವಾಕ್ಸಮರಕ್ಕೆ ಮದ್ದು ಅರಿಯಲು ಬಂದಿದ್ದು, ಸಭೆ ಮೇಲೆ ಸಭೆಗಳನ್ನು ಸುರ್ಜೇವಾಲ ನಡೆಸಲಿದ್ದಾರೆ.