SUDDIKSHANA KANNADA NEWS/ DAVANAGERE/ DATE:16-04-2025
ಕಲಬುರ್ಗಿ: ಜಾತಿ ಗಣತಿ ಜಾರಿಯಿಂದ ಯಾವ ಸಮುದಾಯಕ್ಕೂ ಅನ್ಯಾಯ ಆಗಲು ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.