SUDDIKSHANA KANNADA NEWS/ DAVANAGERE/ DATE:18-08-2024
ದಾವಣಗೆರೆ: ಜಲಸಿರಿ ಯೋಜನೆ ಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆ.18 ರಂದು ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ
ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯ ನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.