ದಾವಣಗೆರೆ: ಬಿದಿರಿಕೆರೆ 66/11 ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 21ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಅಕ್ಟೋಬರ್ 21 ರ ಸೋಮುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಬಿದರಿಕೆರೆ ವ್ಯಾಪ್ತಿಯ ಬರುವ ಎಲ್ಲಾ ಗ್ರಾಮಗಳ ಐ.ಪಿ. ಮಾರ್ಗಗಳಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.