SUDDIKSHANA KANNADA NEWS/ DAVANAGERE/ DATE:25-10-2024
ದಾವಣಗೆರೆ: ಜಗಳೂರು ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 26 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಜಗಳೂರು ಟೌನ್ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ ಮಾರ್ಗಗಳಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
ವಾರ್ಷಿಕ ಬಹುಮಾನಕ್ಕೆ ಅರ್ಜಿ ಆಹ್ವಾನ:
ಪ್ರಸಕ್ತ ಸಾಲಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ ವಿಷಯಗಳ ಸಂವಹನಕ್ಕೆ ದಿವ್ಯಾಂಗ ವ್ಯಕ್ತಿಯ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸುವ ಕೆ.ಎಸ್.ಟಿ.ಎ. ವಾರ್ಷಿಕ ಬಹುಮಾನ ಮತ್ತು ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ವಿವರಗಳಾಗಿ ಅಕಾಡೆಮಿಯ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 2025 ರ ಜನವರಿ 28 ಕೊನೆ ದಿನವಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.