SUDDIKSHANA KANNADA NEWS/ DAVANAGERE/ DATE:12-12-2024
ದಾವಣಗೆರೆ: ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.13 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.
ಎಫ್-06ಡಿ.ಸಿ.ಎಂ ಫೀಡರ್ ವ್ಯಾಪ್ತಿಯ ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕದಂಬ ಪಾರ್ಕ್, ಬಾಲಾಜಿ ಅಪಾರ್ಟ್ ಮೆಂಟ್ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.