SUDDIKSHANA KANNADA NEWS/ DAVANAGERE/ DATE:20-12-2024
ದಾವಣಗೆರೆ: ವಿವಿಧೆಡೆ ಡಿಸೆಂಬರ್ 21ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬಿಳಿಚೋಡು ಹಾಗೂ ಸೊಕ್ಕೆ ವಿ.ವಿ.ಕೇಂದ್ರದ 220 ಕೆ.ವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ 66/11 ಕೆವಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ , ಐ.ಪಿ ಮಾರ್ಗಗಳಿಗೆ ಡಿ.21 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಭೆ:
ದಾವಣಗೆರೆ ನಗರ ಉಪ ವಿಭಾಗ-1ರ ವತಿಯಿಂದ ಡಿ.21 ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.