SUDDIKSHANA KANNADA NEWS/ DAVANAGERE/ DATE:24-02-2025
ದಾವಣಗೆರೆ: ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಲೂರು, ಬಿ.ಜಿ ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿಕ್ಯಾಂಪ್, ಪುಟಗನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ನಿಂಬಳಗೆರೆ-ಸೊಕ್ಕೆ 66ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.