ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು, ಭಾರತ ಹೀನಾಯ ಸೋಲಿನೊಂದಿಗೆ ಸರಣಿ ಸೋಲುಕಂಡಿದೆ. ಇದರೊಂದಿಗೆ ಟಿ20 ವಿಶ್ವಕಪ್ ಗೆದ್ದ ಬಳಿಕ ಏಕದಿನ ಮತ್ತು ಟೆಸ್ಟ್ನಲ್ಲಿ ಸತತ 3ನೇ ಸರಣಿಯಲ್ಲಿ ಭಾರತ ಸೋಲು ಕಂಡಿದೆ. ಟೀಂ ಇಂಡಿಯಾದ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬ್ಯಾಟಿಂಗ್ ಕೋಚ್ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಂದ್ಯದ ಬಳಿಕ ಸ್ಟಾರ್ಸ್ಫೋರ್ಟ್ಸ್ ಜೊತೆಗೆ ಮಾತನಾಡಿದ ಸುನೀಲ್ ಗವಾಸ್ಕರ್, ನಾನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ಬಗ್ಗೆ ಮಾತನಾಡುತ್ತಿಲ್ಲ. ಆದ್ರೆ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ಗಳು ಏನ್ ಮಾಡ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಭಾರತ 46 ರನ್ಗಳಿಗೆ ಆಲೌಟ್ ಆಗಿದ್ದನ್ನು ನೋಡಿದ್ದೇವೆ. ಅಲ್ಲದೇ ಆ ಸರಣಿಯಲ್ಲೂ ಭಾರತ ಸೋಲು ಅನುಭವಿಸಿತು. ಬೌಲಿಂಗ್ ಪ್ರದರ್ಶನ ಉತ್ತಮವಾಗಿದೆ. ಆದ್ರೆ ಬ್ಯಾಟಿಂಗ್ನಲ್ಲಿ ಧಮ್ ಇಲ್ಲ. ನಾನೊಬ್ಬ ಟೆಸ್ಟ್ ಪ್ಲೇಯರ್ ಆಗಿ ಇದನ್ನ ಮಾತನಾಡ್ತಿದ್ದೇನೆ. ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ 2 ತಿಂಗಳ ಅಭ್ಯಾಸ ಇತ್ತು. ಈಗ ಕೋಚ್ಗಳು ಬ್ಯಾಟಿಂಗ್ನಲ್ಲಿ ಏನ್ ಇಂಪ್ರೂವ್ಮೆಂಟ್ ಆಗಿದೆ ಅಂತ ಹೇಳಲಿ ಎಂದು ಕಿಡಿಕಾರಿದ್ದಾರೆ.