SUDDIKSHANA KANNADA NEWS/ DAVANAGERE/ DATE:18-12-2023
ದಾವಣಗೆರೆ: ದಾವಣಗೆರೆಯಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಅಧಿವೇಶನ. ಈ ಕಾರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿಲ್ಲ. ಇದು ಸಮಾಜದ ಕಾರ್ಯಕ್ರಮ ಆಗಿರುವುದರಿಂದ ಕರೆದಿಲ್ಲ. ಹಾಗಾಗಿ, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೇರೆ ಬೇರೆ ಜಾತಿಗಳ ಸಮಾವೇಶಕ್ಕೆ ಸಿಎಂ ಅವರನ್ನು ಕರೆದು ಮನವಿ ಸಲ್ಲಿಸಲಾಗುತ್ತದೆ, ಹಾಗಾಗಿ, ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆಯಾ ಎಂಬ ಪ್ರಶ್ನೆ ಈ ಉತ್ತರ ನೀಡಿದರು.
ಯಾವುದೇ ಊಹಾಪೋಹಗಳಿಗೆ ಆಸ್ಪದ ಕೊಡುವುದು ಬೇಡ. ವೀರಶೈವ ಲಿಂಗಾಯತ ಸಮಾಜದ ಕಾರ್ಯಕ್ರಮ ಇದು. ಹಾಗಾಗಿ, ಬೇರೆಯವರನ್ನು ಕರೆದಿಲ್ಲ. ಮಹಾ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.