ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನರ ನಾಡಿಮಿಡಿತ ಕೈ ಪರ, ಅಪಪ್ರಚಾರದಿಂದ ಯಾರೂ ಹತಾಶರಾಗಬಾರದು: ಸಿಎಂ ಕಿವಿಮಾತು

On: January 10, 2024 10:01 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-01-2024

ಬೆಂಗಳೂರು: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದರು.

ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ
ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿ ಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು
ರಚಿಸಲಾಗುತ್ತಿದೆ ಎಂದರು.

ಕಾರ್ಯಕರ್ತರಿಗೆ, ಶಾಸಕರಲ್ಲದವರಿದೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ.
ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ , ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ
ಇರಲಿದೆ . ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದು ಹೇಳಿದರು.

ಭಾರತ್ ಜೋಡೋ ನ್ಯಾಯ ಯಾತ್ರಾ

ಲೋಕಸಭಾ ಚುನಾವಣೆ ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ ಅವರು 14 ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ
ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಕಾರಾತ್ಮಕವಾಗಿರಿ: ಸಿಎಂ ಕಿವಿಮಾತು

ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಸಿಎಂ ಕಿವಿಮಾತು ಹೇಳಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment