SUDDIKSHANA KANNADA NEWS/ DAVANAGERE/ DATE:25-12-2024
ಬೆಳಗಾವಿ: ನೋ ಪಾಲಿಟಿಕ್ಸ್, ಹೋಂ ಮಿನಿಸ್ಟರ್ ಮಾತನಾಡ್ತಾರೆ. ಜೈ ಭೀಮ್, ಜೈ ಸಂವಿಧಾನ.
ಇದು ಬೆಳಗಾವಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಕೊಟ್ಟ ಉತ್ತರ.
ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸಿ. ಟಿ. ರವಿ ಅವರನ್ನು ರಾತ್ರಿಯಿಡಿ ಕಾರಿನಲ್ಲಿ ಖಾನಾಪುರ ಪಿಎಸ್ಐ ಸುತ್ತಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಸಸ್ಪೆಂಡ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೀತಿ.
ಈ ಪ್ರಕರಣದ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡುತ್ತಾರೆ. ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನ, ಕಾರ್ಯಕಾರಿ ಸಭೆ ಕುರಿತಂತೆ ಮಾತ್ರ ಚರ್ಚೆ ಮಾಡಿದ್ದೇನೆ. ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಹೇಳಿದರು.