SUDDIKSHANA KANNADA NEWS/ DAVANAGERE/ DATE:10-12-2024
ಬೆಳಗಾವಿ: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ.
ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ. ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ
ಕೃಷ್ಣ ಬೈರೇಗೌಡ ತಿಳಿಸಿದರು.
ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
ಗೋಮಾಳ ಜಮೀನುಗಳನ್ನು ಬೇರೆ ಉದ್ದೇಶಗಳಿಗೆ ಯಾವುದೇ ಕಾರಣಕ್ಕೂ ನೀಡಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿರುವುದರಿಂದ ಮಂಜೂರು ಮಾಡಲಾಗುವುದಿಲ್ಲ. ಈಗ ನಿಯಮಾವಳಿ ಬದಲಾಯಿಸಲು ಆಗದು ಎಂದು ಕೃಷ್ಣಬೈರೇಗೌಡ ಮಾಹಿತಿ ನೀಡಿದರು.