SUDDIKSHANA KANNADA NEWS/ DAVANAGERE/ DATE:05-09-2024
ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19 ರಿಂದ 2022-23 ಹಾಗೂ 2023-24 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳ ವಿದ್ಯಾರ್ಥಿಗಳು ವಾರ್ಷಿಕ, ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸೂಚಿಸಿದೆ.
ಬಿ.ಎ, ಬಿ.ಕಾಂ, ಮತ್ತು ನಾನ್ ಸಿ.ಬಿ.ಸಿ.ಎಸ್ ಕೋರ್ಸುಗಳ ಮತ್ತು ಸಿ.ಬಿ.ಸಿ.ಎಸ್., ಕೋರ್ಸ್ಗಳಾದ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಲ್.ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್ಸಿ, ಎಲ್ಲಾ ಎಂ.ಎಸ್ಸಿ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ವಾರ್ಷಿಕ, ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ರೂ.200 ದಂಡ ಶುಲ್ಕದೊಂದಿಗೆ ಸೆ.13 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ ನಲ್ಲಿ ಪರೀಕ್ಷಾ ಅರ್ಜಿ ಮತ್ತು ಪರೀಕ್ಷಾ ಶುಲ್ಕವನ್ನು ಎಲ್ಲಾ ಅಗತ್ಯ ವಿವರಗಳೊಂದಿಗೆ ಭರ್ತಿಮಾಡಿ ಕಡ್ಡಾಯವಾಗಿ ಅಂತರ್ಜಾಲದ ಮೂಲಕವೇ
ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ತೊಂದರೆಗಳಾದಲ್ಲಿ ಆನ್-ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಲ್ಲಚೆರವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ ಕರಾಮುವಿ ಪ್ರಾದೇಶಿಕ ಕೇಂದ್ರ ಬಳ್ಳಾರಿ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಎಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.