Site icon Kannada News-suddikshana

ಡಿ. ಕೆ. ಶಿವಕುಮಾರ್ ಆಪ್ತ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಗೆ ಶಾಕ್ ಕೊಟ್ಟ ಕಾಂಗ್ರೆಸ್ ಶಿಸ್ತು ಸಮಿತಿ!

Basavaraju V. Shivaganga

SUDDIKSHANA KANNADA NEWS/ DAVANAGERE/DATE:18_08_2025

ದಾವಣಗೆರೆ: ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ.

READ ALSO THIS STORY: ಧರ್ಮಸ್ಥಳ ಬಗ್ಗೆ ಅಪಪ್ರಚಾರ: ತಿಮ್ಮರೋಡಿ, ಮಟ್ಟೆಣ್ಣನವರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಆ. 20ಕ್ಕೆ ದಾವಣಗೆರೆಯಲ್ಲಿ ಪ್ರತಿಭಟನೆ

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೇಳಿಕೆ ನೀಡುತ್ತಿದ್ದರು. ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆ ಒಮ್ಮೆ ಅಲ್ಲ ಮೊದಲಿನಿಂದಲೂ ನೀಡುತ್ತಲೇ ಬಂದಿದ್ದಾರೆ. ಡಿ. ಕೆ. ಶಿವಕುಮಾರ್ ಸಿಎಂ ಆದ ಬಳಿಕ ಕೌಂಟರ್ ಅನ್ನು ನಾನೇ ಕೊಡುತ್ತೇನೆಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದರು.

ಡಿಸೆಂಬರ್ ವರೆಗೆ ಮಾಧ್ಯಮಗಳ ಮುಂದೆ ಏನೂ ಮಾತನಾಡುವುದಿಲ್ಲ. ಇದೆಲ್ಲಾ ಆಫ್ ದ ರೆಕಾರ್ಡ್ ಎಂದು ಕಾರ್ಯಕರ್ತರೊಂದಿಗೆ ಮಾತನಾಡುವಾಗ ಹೇಳಿಕೆ ನೀಡಿದ್ದರು. ಆ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಲೂ ಡಿ. ಕೆ. ಶಿವಕುಮಾರ್ ಸಿಎಂ ಆಗಿಯೇ ಆಗುತ್ತಾರೆ ಎಂದು ಹೇಳಿದ್ದರು. ಹಲವು ಬಾರಿ ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂಬ ಹೈಕಮಾಂಡ್ ಆದೇಶ ಮತ್ತು ಡಿ. ಕೆ. ಶಿವಕುಮಾರ್ ಮಾತಿಗೂ ಬೆಲೆ ಕೊಟ್ಟಿರಲಿಲ್ಲ. ಹಾಗಾಗಿ, ಬಿಸಿ ಮುಟ್ಟಿಸುವ ಕೆಲಸವನ್ನು ಈಗ ಡಿ. ಕೆ. ಶಿವಕುಮಾರ್ ಮಾಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮತ್ತು ಪಕ್ಷದ ಹಿರಿಯ ನಾಯಕರ ಬಗ್ಗೆ ಮಾತನಾಡಿರುವ ಕುರಿತಂತೆ ಶಿವಗಂಗಾ ಬಸವರಾಜ್ ಅವರಿಗೆ ಕೆಪಿಸಿಸಿ ಶಿಸ್ತು ಸಮಿತಿ ನೊಟೀಸ್ ನೀಡಿದ್ದು, ಉತ್ತರ ನೀಡಲು ಏಳು ದಿನಗಳ ಕಾಲದೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.

ಪಕ್ಷ ಹಾಗೂ ಸರ್ಕಾರಕ್ಕೆ ಗೊಂದಲ ಹಾಗೂ ಮುಜುಗರ ತರುವ ರೀತಿಯಲ್ಲಿ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದೀರಿ. ಅಶಿಸ್ತಿನ ಹೇಳಿಕೆಗಳನ್ನು ಸಹಿಸಲು ಆಗದು. ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ನೊಟೀಸ್ ಗೆ ಸೂಕ್ತ ಉತ್ತರ ನೀಡದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಿಸ್ತು ಸಮಿತಿಯ ಸಂಚಾಲಕರಾದ ನಿವೇದಿತ್ ಆಳ್ವಾ ನೊಟೀಸ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.
Exit mobile version