Site icon Kannada News-suddikshana

NTPC Recruitment 2024: ತಿಂಗಳಿಗೆ 1.20 ಲಕ್ಷ ಸಂಬಳ- ಎಂಜಿನಿಯರಿಂಗ್ ಆದವರಿಗೆ ಇಲ್ಲಿದೆ ಕೆಲಸ

NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(National Thermal Power Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಅಸಿಸ್ಟೆಂಟ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ/ಡಿಪ್ಲೊಮಾ, ಎಂ.ಎಸ್ಸಿ, ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ/ OBC/ EWS ಅಭ್ಯರ್ಥಿಗಳು: 300/-
SC/ ST/PWBD/ XSM/ ಮಹಿಳಾ ಅಭ್ಯರ್ಥಿಗಳು: ಇಲ್ಲ
ಪಾವತಿ ವಿಧಾನ: ಆನ್‌ಲೈನ್/ ಆಫ್‌ಲೈನ್

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ವೇತನ:
ಮಾಸಿಕ ₹ 30,000-1,20,000

ಆಯ್ಕೆ ಪ್ರಕ್ರಿಯೆ:
ಆನ್​ಲೈನ್ ಟೆಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

Exit mobile version